ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Share with

ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ಯುವ ಮೋರ್ಚಾ ಬಂಟ್ವಾಳ ಮಂಡಲ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಬಿಸಿರೋಡಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಜನ್ಮ ದಿನವನ್ನು ಸೇವಾ ಕಾರ್ಯದ ಮೂಲಕ ಆಚರಿಸಿ ಮಾದರಿಯ ನಡೆಯನ್ನು ಬಿಜೆಪಿ ಮಾಡುತ್ತಿದೆ. ಇನ್ನೊಂದು ಜೀವವನ್ನು ಉಳಿಸುವ ಪುಣ್ಯದ ಕಾರ್ಯ ರಕ್ತದಾನವಾಗಿದ್ದು, ಯುವಕರು ಇಂತಹ ಕೆಲಸಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಅವರು ತಿಳಿಸಿದರು. ಇದೇ ಬಂಟ್ವಾಳ ಯುವಮೋರ್ಚಾದ ಕಾರ್ಯವನ್ನು ಶ್ಲಾಘಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ.

ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು, ಅದಕ್ಕಾಗಿ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಂದಾಗಿ ಕೆಲಸ ಮಾಡಬೇಕು ಎಂದು ಅವರು ಕರೆನೀಡಿದರು‌.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ನಾಡಿನ ಸಮಸ್ತ ಜನತೆಗೆ ಅಗತ್ಯಕಾಲಕ್ಕೆ ಬೇಕಾಗುವ ರಕ್ತವನ್ನು ದಾನ ಮಾಡುವ ವಿಶೇಷ ಕಾರ್ಯಕ್ರಮದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಜನ್ಮಾದಿನಾಚರಣೆಯನ್ನು ಆಚರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸೇವಾ ಪಾಕ್ಷಿಕದ ಅಂಗವಾಗಿ ಯುವಮೋರ್ಚಾದ ವತಿಯಿಂದ ನಡೆದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಲು ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ರೆಡ್ ಕ್ರಾಸ್ ಸಂಸ್ಥೆಯ ರಕ್ತನಿಧಿ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ, ಪ್ರಮುಖರಾದ ಅರುಣ್ ರೋಶನ್ , ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ಆನಂದ ಶಂಭೂರು ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ ಸ್ವಾಗತಿಸಿದರು. ಅಶ್ವಥ್ ರಾವ್ ಬಾಳಿಕೆ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *