ಶಿರಾಡಿ ಘಾಟ್‌ನಲ್ಲಿ ಭಾರೀ ಭೂಕುಸಿತ – ಮಣ್ಣಿನಡಿ ಸಿಲುಕಿದ ವಾಹನಗಳು

Share with

ಸಕಲೇಶಪುರ: ರಾಜ್ಯದಲ್ಲಿ ಭಾರೀ ಮಳೆಗೆ ಗುಡ್ಡಗಳು ಕುಸಿಯುತ್ತಿವೆ. ಶಿರಾಡಿ ಘಾಟ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ದಿಢೀರ್ ಗುಡ್ಡ ಕುಸಿದಿದ್ದು, ವಾಹನಗಳು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತಿದೆ.

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಚಲಿಸುತ್ತಿದ್ದ ಕಾರು ,ಲಾರಿ,ಗ್ಯಾಸ್ ಟ್ಯಾಂಕರ್ ಮೇಲೆ ಗುಡ್ಡ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದಿದೆ.

ಶಿರಾಡಿಘಾಟ್ ನಲ್ಲಿ ಇಂದು ಮತ್ತೆ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಸಂಚಾರ ದಟ್ಟಣೆಯಿಂದ ವಾಹನ ಸವಾರರು ಸಕಲೇಶಪುರ ರಸ್ತೆಯಲ್ಲಿ ಕೆಲಕಾಲ ಸಂಚರಿಸಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮನವಿ ಮಾಡಿದ್ದಾರೆ.


Share with