ಕಲ್ಲಡ್ಕ: ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

Share with

ಕಲ್ಲಡ್ಕ: ಬ್ಯಾಂಕಿನ ವ್ಯವಹಾರದ ಜತೆಗೆ ಗ್ರಾಹಕರ ಆರೋಗ್ಯದ ಕಡೆ ಗಮನ ಹರಿಸಿದ ಬ್ಯಾಂಕಿನ ಕಾರ್ಯ ಅಭಿನಂದನದಾಯಕವಾಗಿದೆ ಎಂದು ಮಾಜಿ ಶಾಸಕರಾದ ಏ ಪೂಜಾರಿ ಏಳ್ತಿಮಾರ್ ಅಭಿಪ್ರಾಯ ಪಟ್ಟರು.

ಮಾಜಿ ಶಾಸಕರಾದ ಏ ಪೂಜಾರಿ ಏಳ್ತಿಮಾರ್ ಅವರು ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿದರು.

ಅವರು ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ(ನಿ) ಕಲ್ಲಡ್ಕ ಶಾಖೆ ಪ್ರಾರಂಭವಾಗಿ ಹತ್ತು ವರ್ಷ ಪೂರ್ಣಗೊಳಿಸಿದ್ದರ ಪ್ರಯುಕ್ತ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕೆ ಎಮ್ ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ, ಗುರೂಜಿ ಸ್ವ- ಸಹಾಯ ಸಂಘ ಕಲ್ಲಡ್ಕ, ಸುರಕ್ಷ ಸಂಗಮ ಪೂರ್ಲಿಪಾಡಿ, ಜಾನ್ಸಿರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಳಿ ಕಲ್ಲಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಉದ್ಘಾಟಿಸಿ ಮಾತನಾಡಿದರು.

ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ
ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ(ನಿ) ಇದರ ನಿರ್ದೇಶಕರಾದ ಶ್ರೀ ಸಂಜೀವ ಪೂಜಾರಿ ಗುರುಕೃಪಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ವಿಶೇಷ ಅಧಿಕಾರಿ ಶ್ರೀ ಮೋನಪ್ಪ ಪೂಜಾರಿ ಸಂಘವು ಬ್ಯಾಂಕಿನ ವ್ಯವಹಾರದ ಜೊತೆಗೆ ಮಾಡುವ ಇತರ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು . ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಗುರೂಜಿ ಸ್ವ ಸಹಾಯ ಸಂಘದ ಅಧ್ಯಕ್ಷರಾದ ಪೂವಪ್ಪ ಟೈಲರ್, ಸುರಕ್ಷಾ ಸಂಗಮ ಪೂರ್ಲಿಪಾಡಿ ಇದರ ಗೌರವಾಧ್ಯಕ್ಷರಾದ ವೆಂಕಟರಾಯ ಪ್ರಭು. ಝಾನ್ಸಿ ರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಳಿ ಇದರ ಅಧ್ಯಕ್ಷರಾದ ಮೀನಾಕ್ಷಿ ಅರ್ ಪೂಜಾರಿ, ಕೆಎಂಸಿ ಆಸ್ಪತ್ರೆ ಕ್ಯಾನ್ಸರ್ ಚಿಕಿತ್ಸೆ ತಜ್ಞರಾದ ಡಾಕ್ಟರ್ ಶೌರ್ಯ ಬ್ಯಾನರ್ಜಿ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ದಂತ ವೈದ್ಯರಾದ ಡಾಕ್ಟರ್ ಅಪರ್ಣ, ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ವಿವಿಧೋದ್ದೇಶ ಸಹಕಾರ ಸಂಘದ ಜೊತೆಗೆ ಸಹಕರಿಸಿದ ಆಸ್ಪತ್ರೆ ಹಾಗೂ ಸಂಘ ಸಂಸ್ಥೆಗಳನ್ನು ಅಭಿನಂದನ ಪತ್ರ ನೀಡಿ ಗೌರವಿಸಲಾಯಿತು. ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಯತಿನ್ ಕುಮಾರ್ ಸ್ವಾಗತಿಸಿ, ಕಲ್ಲಡ್ಕ ಶಾಖ ವ್ಯವಸ್ಥಾಪಕಿ ಬಬಿತಾ ವಂದಿಸಿ ಗುರುದೇವ ವಿವಿದೋದ್ದೇಶ ಸಹಕಾರ ಸಂಘ(ನಿ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಅಶ್ವಥ್ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *