ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆ ಏರಿಕೆ ವಿರುದ್ದ ಬೃಹತ್ ಪ್ರತಿಭಟನೆ

Share with

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆಯನ್ನು ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ದ ಬಿಸಿರೋಡಿನಲ್ಲಿ ( ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ) ದಿನಾಂಕ 20.06.2024 ರ ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆ ನಡೆಯಿತು.

ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರಕಾರದ ಬೊಕ್ಕಸ ಖಾಲಿಯಾಗಿದ್ದು, ಇದೀಗ ಜನರ ರಕ್ತ ಹೀರುವ ಕೆಲಸಕ್ಕೆ ಮುಂದಾಗಿದೆ. ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ಮಾಡಿದ ಸರಕಾರಕ್ಕೆ ಅರ್ಥಿಕ ವ್ಯವಸ್ಥೆಯನ್ನು ಸರಿದೂಗಿಸಲು ಸಾಧ್ಯವಾಗದೆ ಒದ್ದಾಟ ಮಾಡುತ್ತಿದೆ. ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಭಾಗ್ಯ ದೊರೆತಿಲ್ಲ. ಜನರಿಗೆ ಬೇಕಾದ ಮೂಲಭೂತವಾದ ಸೌಕರ್ಯಗಳನ್ನು ಒದಗಿಸಿಲು ಸರಕಾರದಿಂದ ಸಾಧ್ಯವಾಗದೆ, ಗ್ಯಾರಂಟಿಗಾಗಿ ಚಡಪಡಿಸುತ್ತಿದೆ.
ಸೀಮಿತ ವರ್ಗಕ್ಕೆ ಸೇರಿದ ಗ್ಯಾರಂಟಿ ಯೋಜನೆಗಾಗಿ ರಾಜ್ಯದ ಅಸಂಖ್ಯಾತ ಜನರು ದುಡಿದ ಹಣವನ್ನು ಹಿಂಬಾಗಿಲ ಮೂಲಕ ಪಡೆಯಲು ಮುಂದಾಗಿರುವ ಲೂಟಿ ಸರಕಾರದ ವಿರುದ್ಧ ಹೋರಾಟದ ಸಮರ ಸಾರಲಿದ್ದೇವೆ.
ಬೆಲೆ ಏರಿಕೆಯ ಬರೆಯ ಜೊತೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ನಿತ್ಯ ಕೊಲೆ, ಲೂಟಿ,ದರೋಡೆ ,ಕಳ್ಳತನ ,ಕೋಮು ಸಂಘರ್ಷಗಳು ಮತ್ತೆ ರಾಜ್ಯದಲ್ಲಿ ಹೆಚ್ಚಾಗಿದೆ .

ಜನರನ್ನು ಮೋಸ ಮಾಡಿ ಅಧಿಕಾರಕ್ಕೆ ಬಂದು ಜನರನ್ನು ಸುಲಿಗೆ ಮಾಡುವ ಜನವಿರೋಧಿ ನೀತಿಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ಪ್ರತಿಭಟನೆಯಲ್ಲಿ ಸರ್ವರೂ ಭಾಗವಹಿಸಿ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಂಟ್ವಾಳ ಕ್ಷೇತ್ರ ಶಾಸಕರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Share with

Leave a Reply

Your email address will not be published. Required fields are marked *