ವೆನ್ಲಾಕ್ ಆಸ್ಪತ್ರೆ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್..: ದ. ಕ ಜಿಲ್ಲಾಧಿಕಾರಿ

Share with

ಮಂಗಳೂರು: ಜಿಲ್ಲಾ ವೆನ್ಹಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ.ಸೂಚಿಸಿದ್ದಾರೆ.

ವೆಸ್ಲಾಕ್ ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಕಾರ್ಯ ಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳನ್ನು ರೋಗಿಗಳಿಗೆ ಸ್ನೇಹಿಯಾಗಿ ಕಾರ್ಯರೂಪಕ್ಕೆ ತರಲು ಮಾಸ್ಟರ್‌ಫ್ಲ್ಯಾನ್ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸೂಚಿಸಿದರು.

ವೆಸ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ| ಶಿವಪ್ರಕಾಶ್ ಮಾತನಾಡಿ, ವೆಸ್ಲಾಕ್ ಆಸ್ಪತ್ರೆಯ ಪ್ರಸಕ್ತ ಇರುವ ಹೊರರೋಗಿ ವಿಭಾಗಗಳ ಕಟ್ಟಡವನ್ನು ತೆರವುಗೊಳಿಸಿ ನೂತನ ಅತ್ಯಾಧುನಿಕ ಮಾದರಿಯ ಒ.ಪಿ.ಡಿ. ಕಟ್ಟಡವನ್ನು ನಿರ್ಮಿಸಲು ರಾಜ್ಯ ಸರಕಾರದಿಂದ 70 ಕೋ. ರೂ. ಅನುದಾನ ಮಂಜೂರಾಗಿದೆ. ಪ್ರಸಕ್ತ ಅಲ್ಲಿರುವ ಎಲ್ಲ ವಿಭಾಗಗಳನ್ನು ಟ್ರಾಮಾ ಬ್ಲಾಕ್‌ಗೆ ಸ್ಥಳಾಂತರಿಸಿ ಹಳೆ ಒ.ಪಿ.ಡಿ. ಕಟ್ಟಡವನ್ನು ಕೆಡವಲಾಗುವುದು. ಕಾಮಗಾರಿಗೆ ಟೆಂಡರ್‌ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ರೋಗಿಗಳಿಗೆ ನೆರವಾಗಲು ಒ.ಪಿ.ಡಿ, ಎಕ್ಸ್‌ರೇ, ರೇಡಿಯೋಲಜಿ ಮತ್ತಿತರ ಘಟಕಗಳನ್ನು ಒಂದೇ ಕಡೆ ನಿರ್ಮಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.ಲೇಡಿಗೋಶನ್ ಆಸ್ಪತ್ರೆಗೆ ಪ್ರತ್ಯೇಕ ಆರೋಗ್ಯ ರಕ್ಷಾ ಸಮಿತಿ ರಚಿಸಲು ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ವೆಸ್ಲಾಕ್ ಪಿ.ಎಂ. ಅಭಿಮ್ ಯೋಜನೆಯಡಿ 50 ಬೆಡ್‌ಗಳ ಕ್ರಿಟಿಕಲ್ ಕೇರ್‌ಕಟ್ಟಡದ ಕಾಮಗಾರಿ ಕೊನೆಯ ಹಂತದಲ್ಲಿದೆ. ಅತ್ತಾವರ ರಸ್ತೆಯಲ್ಲಿರುವ ವೆಸ್ಲಾಕ್ ನ 2.71 ಎಕ್ರೆ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡಲು ಪೇ ಆ್ಯಂಡ್ ಪಾರ್ಕಿಂಗ್ ಕಾಮಗಾರಿಗೆ ಮಹಾನಗರಪಾಲಿಕೆಗೆ ಪತ್ರ ಬರೆಯಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.

ವೆನ್ಸಾಕ್ ಹೊಸ ಸರ್ಜಿಕಲ್ ಬ್ಲಾಕ್ ಕಟ್ಟಡದ ನೆಲಮಹಡಿಯ ಮಳಿಗೆಗಳನ್ನು ವಾಣಿಜ್ಯ ಉಪಯೋಗಕ್ಕೆ ಹರಾಜು ಮೂಲಕ ನೀಡಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಲೇಡಿಗೋಶನ್ ಅಧೀಕ್ಷಕ ಡಾ| ದುರ್ಗಾಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *