ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದ ವೀಡಿಯೊ ತಾತ್ಕಾಲಿಕವಾಗಿ ತೆಗೆದುಹಾಕಲ್ಪಟ್ಟ ಘಟನೆಗೆ ಸಂಬಂಧಿಸಿ ಮೆಟಾ ಕ್ಷಮೆಯಾಚಿಸಿದೆ.

ತಾಂತ್ರಿಕ ದೋಷದಿಂದಾಗಿ ವೀಡಿಯೊ ತೆಗೆದುಹಾಕಲಾಗಿದ್ದು, ಬಳಿಕ ಅದನ್ನು ಮರುಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರರು ತಿಳಿಸಿದ್ದಾರೆ.
ಈ ಘಟನೆಗೆ ಕೇಂದ್ರ ಸರ್ಕಾರ ಗಂಭೀರವಾಗಿ ಸ್ಪಂದಿಸಿದ್ದು, ವೀಡಿಯೊವನ್ನು ತೆಗೆದುಹಾಕಲು ಕಾರಣವೇನು ಎಂಬುದರ ಕುರಿತು ಮೆಟಾದಿಂದ ವಿವರಣೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಮೆಟಾ ಅಧಿಕಾರಿಗಳು ಹಾಗೂ ಸಂಬಂಧಿತ ಪ್ರತಿನಿಧಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ.
ಜುಲೈ 23ರಂದು ಪ್ರಧಾನಿ ಮೋದಿ ಅವರು ಫೇಸ್ಬುಕ್ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದರು. ಬಳಿಕ ಅದು ದಿಢೀರ್ ಕಾಣೆಯಾಗಿದ್ದರಿಂದ ಈ ಬೆಳವಣಿಗೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮೆಟಾ ತಾಂತ್ರಿಕ ದೋಷವೇ ಕಾರಣ ಎಂದು ಸ್ಪಷ್ಟಪಡಿಸಿ, ವೀಡಿಯೊವನ್ನು ಮರುಸ್ಥಾಪಿಸಿದೆ.




