ಬೆಂಗಳೂರು: ವಿಧಾನಸೌಧದ ಸುತ್ತಮುತ್ತ ಟ್ರಾಫಿಕ್ ಜಾಮ್ ಹಿನ್ನೆಲೆ ವಿಧಾನಸೌಧದ ಪೂರ್ವ ಗೇಟ್ ತೆರೆಯುವಂತೆ ಸ್ಪೀಕರ್ ಯುಟಿ ಖಾದರ್ ಅವರಿಗೆ ಸಚಿವ ಕೆ.ಜೆ.ಜಾರ್ಜ್ ಮನವಿ ಮಾಡಿದ್ದಾರೆ.
ಇದಕ್ಕೆ ಸ್ಪೀಕರ್ ಅರ್ಧ ಗಂಟೆ ಮೊದಲೇ ಬಂದರೆ ಬೇಗ ಸದನಕ್ಕೆ ತಲುಪಬಹುದು ಎಂದು ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಮರು ಉತ್ತರಿಸಿದ ಕೆ ಜೆ ಜಾರ್ಜ್‌ರವರು ಬೇಕಾದರೆ 3 ಗಂಟೆಗಳ ಕಾಲ ಮೊದಲೇ ಹೊರಡುತ್ತೇವೆ. ಕನಿಷ್ಠ ಅಧಿವೇಶನದ ಸಮಯದಲ್ಲಾದರೂ ಗೇಟ್ ಓಪನ್ ಮಾಡಿಸಿ. ಈ ಬಗ್ಗೆ ಚರ್ಚೆ ಮಾಡಿ ಪರಿಶೀಲನೆ ಮಾಡುತ್ತೇವೆ ಎಂದು ಸ್ಪೀಕರ್ ಹೇಳಿದರು.