ಉಡುಪಿ: ಕಳೆದ ಮೂರು ತಿಂಗಳುಗಳಿಂದ ಜಿಲ್ಲೆಯ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಉಡುಪಿ ಜಿಲ್ಲೆಗೆ ಆಗಮಿಸಿದರು.
ಮಣಿಪಾಲದ ರಜತಾದ್ರಿಯಲ್ಲಿರುವ ಡಾ. ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಚುನಾವಣೆಯ ವೇಳೆ ಜಿಲ್ಲೆಗೆ ಆಗಮಿಸದ ಹಿನ್ನಲೆಯಲ್ಲಿ ಸ್ವಪಕ್ಷೀಯರೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ. ಮೂರು ತಿಂಗಳ ಬಳಿಕ ಜಿಲ್ಲೆಗೆ ಆಗಮಿಸಿದ್ದು, ಕೆಡಿಪಿ ಸಭೆ ನಡೆಸುತ್ತಿದ್ದಾರೆ.