ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

Share with

ಮಂಗಳೂರು : ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್ ಸಂದೇಶದ ಮೂಲಕ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.

https://x.com/CaptBrijesh/status/1916661096246886498


Share with

Leave a Reply

Your email address will not be published. Required fields are marked *