ನಿಲ್ಲದ ಲೈಂಗಿಕ ದೌರ್ಜನ್ಯ; ಉತ್ತರಾಖಂಡದಲ್ಲಿ ಬಸ್ನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Share with

ಡೆಹ್ರಾಡೂನ್: ದೆಹಲಿಯಿಂದ ಡೆಹ್ರಾಡೂನ್ಗೆ ತೆರಳಿದ ಸರ್ಕಾರಿ ಬಸ್ನೊಳಗೆ ಬಸ್ ನಿಲ್ದಾಣದಲ್ಲಿಯೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನ ಕೃತ್ಯವೊಂದು ಇಡೀ ದೇಶವೇ ಮತ್ತೊಮ್ಮೆ ತಲೆತಗ್ಗಿಸುವಂತೆ ಮಾಡಿದೆ. ಹದಿಹರೆಯದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಆಗಸ್ಟ್ 12ರಂದು ತಡರಾತ್ರಿ ಡೆಹ್ರಾಡೂನ್ ಐಎಸ್‌ಬಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ತಾಪ್ತ ಬಾಲಕಿ ಒಂಟಿಯಾಗಿ ಕುಳಿತಿರುವುದು ಕಂಡುಬಂದಿದ್ದು, ಅತ್ಯಾಚಾರಕ್ಕೊಳಗಾಗಿದ್ದ ಆಕೆಯನ್ನು ಅಲ್ಲಿಂದ ಬಾಲ ನಿಕೇತನಕ್ಕೆ ಕಳುಹಿಸಲಾಗಿದೆ. ಬಾಲ ನಿಕೇತನದಲ್ಲಿ ಕೌನ್ಸೆಲಿಂಗ್‌ನ ಸಮಯದಲ್ಲಿ ಅವಳು ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾಳೆ.

ಡೆಹ್ರಾಡೂನ್ ಹಿರಿಯ ಪೊಲೀಸ್ ಅಧೀಕ್ಷಕ ಅಜಯ್ ಸಿಂಗ್ ನೀಡಿದ ಮಾಹಿತಿಯ ಪ್ರಕಾರ, ಬಂಧಿತರಲ್ಲಿ ಸರ್ಕಾರಿ ಬಸ್‌ನ ಚಾಲಕ ಮತ್ತು ಕಂಡಕ್ಟರ್ ಕೂಡ ಸೇರಿದ್ದಾರೆ. ಆಗಸ್ಟ್ 12ರಂದು ಈ ಘಟನೆ ನಡೆದಿದ್ದು, ಶನಿವಾರ ಸಂಜೆ ಈ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಅವರು ಹೇಳಿದರು.


Share with

Leave a Reply

Your email address will not be published. Required fields are marked *