ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಅಲ್ಪಸಂಖ್ಯಾತರ ಸಭೆ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಭಾಗವಹಿಸಿ ಮಾತನಾಡಿ, ಈ ಬಾರಿ ಮತದಾರರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಮಾತನಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನಪರ ಕಾರ್ಯಗಳಾಗಲಿ, ಜನರ ಸಮಸ್ಯೆಯಾಗಲಿ ಬಗೆಯರಿಯುತ್ತಿಲ್ಲ.
ಅಲ್ಪಸಂಖ್ಯಾತರನ್ನು ಎಲ್ಲ ರೀತಿಯಿಂದಲೂ ಕಡೆಗಣಿಸಲಾಗುತ್ತಿದೆ. ಜೊತೆಗೆ ಅವರು ಆತಂಕದಲ್ಲಿ ಬದುಕುವಂತಾಗಿದೆ. ಈ ನಿಟ್ಟಿನಲ್ಲಿ ಈ ಬಾರಿ ನನಗೆ ಹೆಚ್ಚಿನ ಮತ ನೀಡಿ ಗೆಲ್ಲುವಂತೆ ಮಾಡುವ ಮೂಲಕ ಕ್ಷೇತದ ಅಭಿವೃದ್ಧಿಗೆ ಸಹಕರಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿ’ಸೋಜ, ಎಂಎ.ಗಫೂರ್ ಸೇರಿದಂತೆ ಹಲವು ನಾಯಕರು, ಗಣ್ಯರು ಹಾಜರಿದ್ದರು.