ಸುಳ್ಯ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯ ಜೊತೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣ (ಟ್ವಿಟರ್) ದಲ್ಲಿ ತಾನು ಪುತ್ತೂರಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ತನ್ನ ಪಕ್ಕದಲ್ಲಿದ್ದ ಯುವಕನೋರ್ವ ಅನುಚಿತವಾಗಿ ವರ್ತಿಸಿ, ಬಸ್‌ನಿಂದ ಇಳಿಯುವ ವೇಳೆ ಚೀಟಿಯೊಂದರಲ್ಲಿ ಮೊಬೈಲ್ ನಂಬರನ್ನು ಮಹಿಳೆಗೆ ನೀಡಿ ಕರೆ ಮಾಡುವಂತೆ ಕೈ ಸನ್ನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕಲಂ : 354A(1)(i) 354(ಡಿ)ಐ.ಪಿ.ಸಿ. ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.