ಮಂಗಳೂರು: ರೋಗಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕದ್ರಿ ವ್ಯಾಸನಗರ ನಿವಾಸಿ ಆಶಿಕ್ (32) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಆಶಿಕ್ ತನ್ನ ತಾಯಿಯನ್ನು ತಪಾಸಣೆಗೆಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ವೇಳೆ ಆಸ್ಪತ್ರೆಯ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳಾ ಸಿಬ್ಬಂದಿಯು ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಆಶೀಕ್ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ, ಸ್ಥಳದಲ್ಲಿ ದಾಂಧಲೆಯನ್ನು ನಡೆಸಿದ್ದಾನೆ. ಜೊತೆಗೆ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದು, ಈ ಬಗ್ಗೆ ಸಂತ್ರಸ್ತೆ ಕಂಕನಾಡಿ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿಯು ಕೆಲಸವಿಲ್ಲದೆ ಮನೆಯಲ್ಲೇ ಇದ್ದುದರಿಂದ ಮಾನಸಿಕ ತೊಂದರೆ ಎದುರಿಸುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಪೊಲೀಸರು ಹೇಳಿದ್ದಾರೆ.