ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Share with

ಬೆಳಾಲು: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30ವ) ರವರ ಶವ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಡಿ.30 ರಂದು ನಡೆದಿದೆ.

ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದ ರಾಜೇಶ್ ಪಿ ರವರ ಪತ್ತೆಗಾಗಿ ಅವರ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರು ಆದರೂ ಪತ್ತೆಯಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಡಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಮೃತರು ತಂದೆ ಜಿನ್ನಪ್ಪ ಗೌಡ, ತಾಯಿ ಚನ್ನಕ್ಕ, ಸಹೋದರ ಪ್ರಶಾಂತ್, ಸಹೋದರಿ ಗೀತಾ ರವರನ್ನು ಅಗಲಿದ್ದಾರೆ.


Share with

Leave a Reply

Your email address will not be published. Required fields are marked *