ಉಡುಪಿ: ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ಆಯೋಜಿಸಿದ ಯುವ ಚೌಪಾಲ್ (ಯುವ ಸಂವಾದ) ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು, ಯುವ ಮೋರ್ಚಾದ ಮೂಲಕ ಯುವ ಮತದಾರರನ್ನು ಸಂಘಟಿಸಿ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಕಟಿಬದ್ಧರಾಗೋಣ ಎಂದರು.
ಸಮಾರಂಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಗಳಾದ ವಿಖ್ಯಾತ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಮಾ ಶೆಟ್ಟಿ, ಶಕ್ತಿ ಕೇಂದ್ರದ ಸಂಚಾಲಕರಾದ ಪ್ರವೀಣ್ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರಾದ ಸೋನು ಪಾಂಗಾಳ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.