ಮಣಿಪುರ ಹಿಂಸಾಚಾರ ಸಂಬಂಧ ಪ್ರಧಾನಿ ಮೋದಿ ಪ್ರತಿಪಕ್ಷಗಳ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
‘ವಿಪಕ್ಷಗಳು ಹಿಂಸಾಚಾರ ಕುರಿತಂತೆ ಮೊಸಳೆ ಕಣ್ಣೀರು ಸುರಿಸುತ್ತಿವೆ. ಬೂಟಾಟಿಕೆ ಪ್ರದರ್ಶನ ಮಾಡುತ್ತಿವೆ. ಲೋಕಸಭೆಯಲ್ಲಿ ಮಣಿಪುರ ವಿಷಯದ ಬಗ್ಗೆ ಮಾತನಾಡುವಾಗ ಪ್ರತಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದ್ದು ಸರಿಯಲ್ಲ’ ಎಂದು ಗುಡುಗಿದ್ದಾರೆ. ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಮೋದಿ ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದರು.