ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಮೂರನೇ ದಿನವಾದ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಉತ್ತರ ನೀಡಲಿದ್ದಾರೆ.
ಮೋದಿ ಭಾಷಣದಲ್ಲಿ ಮಣಿಪುರ ಗಲಭೆ, ರಾಹುಲ್ ಗಾಂಧಿ ತಮ್ಮ ಮಾತಿನ ವೇಳೆ ‘ಮಣಿಪುರದಲ್ಲಿ ಭಾರತ ಮಾತೆಯನ್ನು ಕೊಂದಿದ್ದಾರೆ’ ಎಂಬ ಆರೋಪಕ್ಕೆ ಉತ್ತರ ನೀಡುವ ಸಾಧ್ಯತೆ ಇದೆ. ಮೋದಿ ಭಾಷಣದ ಬಳಿಕ ಸ್ಪೀಕರ್ ಅವಿಶ್ವಾಸ ಪ್ರಸ್ತಾವನೆಯನ್ನು ಮತಕ್ಕೆ ಹಾಕಲಿದ್ದಾರೆ.