ಮೂಡುಬಿದಿರೆ: ದನದ ಮಾಂಸ ಮಾರಾಟ; ಓರ್ವನ ಬಂಧನ

Share with

ಮೂಡುಬಿದಿರೆ: ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಫೆ.18ರಂದು ಬಂಧಿಸಿದ್ದಾರೆ.

ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬಂಧಿತನನ್ನು ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಈತ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕರಾದ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ದಾಳಿ ವೇಳೆ ಕೋಲ್ಡ್ ಸ್ಟೋರೆಜ್ ನಲ್ಲಿ 10 ಕೆ.ಜಿಯಷ್ಟು ದನದ ಮಾಂಸ ದೊರೆತಿದೆ. ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಈ ಹಿಂದೆಯೂ ಇಸ್ಮಾಯಿಲ್ ಮೇಲೆ ಹಲವು ಪ್ರಕರಣಗಳು ದಾಖಲಾಗಿವೆ.


Share with

Leave a Reply

Your email address will not be published. Required fields are marked *