ಮೂಡುಬಿದಿರೆ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಕೇರಳದಲ್ಲಿ ಪತ್ತೆ..!

Share with

ಮೂಡುಬಿದಿರೆ: ನಾಪತ್ತೆಯಾಗಿದ್ದ ಮೂಡುಬಿದಿರೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿಪಿಟಿ ಶಿಕ್ಷಣ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾಳೆ.

ಬೈಂದೂರು ತಾಲೂಕಿನ ಕೊಲ್ಲೂರಿನ ನಿವಾಸಿ ಆದಿರಾ

ಬೈಂದೂರು ತಾಲೂಕಿನ ಕೊಲ್ಲೂರಿನ ನಿವಾಸಿ ಆದಿರಾ(19) ಫೆ.23ರಂದು ಬೆಳಿಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್‌ನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿದ್ದರು.

ಬಳಿಕ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದರು. ಈಕೆ ಹಾಸ್ಟೆಲ್‌ನಲ್ಲಿ ವಾಸವಾಗಿ ಶಿಕ್ಷಣ ಪಡೆಯುತ್ತಿದ್ದರು. ಇದೀಗ ಬೈಂದೂರಿನ ನಿವಾಸಿಯಾಗಿರುವ ಪ್ರಿಯಕರನನ್ನು ಮದುವೆಯಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.


Share with

Leave a Reply

Your email address will not be published. Required fields are marked *