ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡು ವಿದ್ಯಾರ್ಥಿನಿ ಮೃತ್ಯು..!

Share with

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏಪ್ರಿಲ್ 14ರಂದು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ

ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟ ವಿದ್ಯಾರ್ಥಿನಿ.

ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಇವರು ತ್ರೋಬಾಲ್ ಆಟಗಾರ್ತಿಯಾಗಿದ್ದು, ಉತ್ತಮ ನೃತ್ಯಪಟುವೂ ಆಗಿದ್ದರು. ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ. ಮೂಲತಃ ವಾಲ್ಪಾಡಿಯವರಾದ ಇವರು ಸದ್ಯ ಮೂಡುಬಿದಿರೆಯಲ್ಲಿ ವಾಸಿಸುತ್ತಿದ್ದಾರೆ. 


Share with

Leave a Reply

Your email address will not be published. Required fields are marked *