ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಎಸಗಿದ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.
ಆರೋಪಿಗಳನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ.
ನ. 27ರಂದು ರಾತ್ರಿ ಸುಮಾರು 8 ಗಂಟೆಗೆ ನಗರದ ಅಂಗಡಿಯೊಂದರಲ್ಲಿ ಕೆಲಸವನ್ನು ಮಾಡುತ್ತಿದ್ದ ಇಬ್ಬರು ಭಿನ್ನ ಕೋಮಿನ ಯುವಕ ಮತ್ತು ಯುವತಿ ಕೆಲಸ ಬಿಟ್ಟ ನಂತರ ಬೈಕ್ ನಲ್ಲಿ ತೆರಳಿ ಮೊಬೈಲ್ ರಿಪೇರಿ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ನೈತಿಕ ಪೊಲೀಸ್ ಗಿರಿ ಎಸಗಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.