ಮುಂಗಾರು ಬರುತ್ತಿದ್ದಂತೆ ಡೆಂಗ್ಯೂ ಹೊತ್ತು ತರುವ ಸೊಳ್ಳೆಗಳು…! ಜಾಗೃತೆ ವಹಿಸದೆ ಇದ್ದರೆ ಪ್ರಾಣಕ್ಕೆ ಕುತ್ತು

Share with

dengue fever

ಬೆಂಗಳೂರು: ಮುಂಗಾರು ಆರಂಭವಾಗುತ್ತಿದ್ದಂತೆ ನಗರದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಡೆಂಗ್ಯೂ ಜ್ವರವು ಸೊಳ್ಳೆ ಕಡಿತದಿಂದ ಬರುವುದು. ಹೆಣ್ಣು ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ವೈರಸ್ ಸೋಂಕು ಹರಡುತ್ತದೆ. ರಕ್ತನಾಳಗಳಿಗೆ ಈ ವೈರಸ್ ಹಾನಿಯುಂಟುಮಾಡುತ್ತದೆ, ಜತೆಗೆ ರಕ್ತಕಣಗಳ ಸಂಖ್ಯೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ಇಳಿಕೆಯಾಗಿ ಅಂಗಾಂಗ ವೈಫಲ್ಯ ಮತ್ತು ಕೆಲವೊಮ್ಮೆ ಜೀವಕ್ಕೂ ಸಂಕಷ್ಟ ತರಬಹುದು.

ಡೆಂಗ್ಯೂ ಜ್ವರದ ಲಕ್ಷಣಗಳು:- ಸೊಳ್ಳೆ ಕಚ್ಚಿದ ನಾಲ್ಕರಿಂದ ಹತ್ತು ದಿನಗಳ ಒಳಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳಬಹುದು. ತಲೆನೋವು, ಮೈಕೈ ನೋವು ಅಥವಾ ಕೀಲು ನೋವು, ವಾಕರಿಕೆ, ಕಣ್ಣುಗಳ ಹಿಂಭಾಗದಲ್ಲಿ ನೋವು, ಊದಿಕೊಂಡಿರುವ ಗ್ರಂಥಿಗಳು, ಚರ್ಮದ ಭಾಗದಲ್ಲಿ ದದ್ದುಗಳು, ಜ್ವರ, ತಲೆನೋವು, ಸುಸ್ತು, ಶೀತ, ಗಂಟಲು ನೋವು, ವಾಂತಿ, ಹೊಟ್ಟೆನೋವು, ಮೈ ಕೈ ನೋವು, ಮೈಮೇಲೆ ಅಲರ್ಜಿ ರೀತಿಯಲ್ಲಿ ಗುಳ್ಳೆಗಳು ಏಳುವುದು.

ಡೆಂಗ್ಯೂ ಲಕ್ಷಣ ಕಂಡು ಬಂದಾಗ ಪಪ್ಪಾಯಿ ಹಾಗೂ ಕಿವಿ ಹಣ್ಣನ್ನು ತಿನ್ನಬೇಕು. ಪಪ್ಪಾಯಿ ಎಲೆಯ ರಸ ಪ್ಲೇಟ್‌ಲೆಟ್‌ ಹೆಚ್ಚಿಸುತ್ತದೆ.

ಡೆಂಗ್ಯೂ ಮುನ್ನೆಚ್ಚರಿಕೆ ಏನು?:- ತೆಂಗಿನ ಚಿಪ್ಪು, ಟಯರ್‌ನಂತಹ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ. ತೊಟ್ಟಿ, ಬಿಂದಿಗೆ, ಡ್ರಮ್‌ಗಳಲ್ಲಿ2-3 ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಬೇಕು. ಸೊಳ್ಳೆಗಳನ್ನು ತಡೆಯಲು ಕಿಟಕಿ ಬಾಗಿಲುಗಳಿಗೆ ಮೆಶ್‌ ಹಾಕಿ ಅಥವಾ ಸೊಳ್ಳೆ ನಾಶಕ ಔಷಧಗಳನ್ನು ಬಳಸಿ. ಸೊಳ್ಳೆಗಳನ್ನು ನಿಯಂತ್ರಿಸಲು ಬೇವಿನ ಸೊಪ್ಪಿನ ಹೊಗೆ ಹಾಕುವುದು ಒಳಿತು. ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯಬೇಕು.


Share with

Leave a Reply

Your email address will not be published. Required fields are marked *