ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ!

Share with

ತುಮಕೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ಹಾಗೂ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ತಾಯಿ, ಮಗಳನ್ನು ವಿರುಪಾಕ್ಷಿಪುರದ ಪ್ರೇಮಕುಮಾರಿ (50) ಮತ್ತು ಪೂರ್ಣಿಮಾ (30) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಘಟನೆ ಕುರಿತಂತೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with