15 ವರ್ಷದ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ಹೆತ್ತ ತಾಯಿ, ಮಲತಂದೆ..!!

Share with

ಬೆಂಗಳೂರು: ಹಣದ ಆಸೆಗಾಗಿ 15 ವರ್ಷದ ಮಗಳನ್ನೇ ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ದೂಡಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

15 ವರ್ಷದ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ, ಆಕೆಯ ಮಲತಂದೆ ಹಾಗೂ ಮತ್ತೋರ್ವ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ಮುಗಿದ ಬಳಿಕ ಈ ಬಗ್ಗೆ ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

15 ವರ್ಷದ ಸಂತ್ರಸ್ತೆಯ ತಾಯಿ ಹಾಗೂ ಮಲತಂದೆ ಕಾರಿನಲ್ಲಿ ಪ್ರತಿದಿನ ಬಾಲಕಿ ಯನ್ನು ಆರೋಪಿ ಮಹಿಳೆಯೊಬ್ಬರ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಇದ್ದು ಗ್ರಾಹಕರ ಕಿರುಕುಳಕ್ಕೆ ಒಳಗಾಗುತ್ತಿದ್ದಳು. ಗ್ರಾಹಕರ ಬಳಿ ಆರೋಪಿ ಮಹಿಳೆಯು 6 ರಿಂದ 10 ಸಾವಿರ ರೂ. ವಸೂಲು ಮಾಡುತ್ತಿದ್ದಳು. ಇದರಿಂದ ಬಂದ ಹಣದಲ್ಲಿ ಅರ್ಧದಷ್ಟು ಹಣ ವನ್ನು ಸಂತ್ರಸ್ತೆಯ ತಾಯಿಗೆ ನೀಡಲಾ ಗುತ್ತಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *