ಪುತ್ತೂರು: ‘ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಿಯಲ್ ಆರ್ಟ್ಸ್’ ವತಿಯಿಂದ ಜ.7ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪ್ರಥಮ ಹಾಗೂ ಗ್ರೂಪ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.


ವಿಟ್ಲದ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿ ಅವರು ಇತ್ತೀಚೆಗೆ ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದರು. ಇವರು ವಿಟಿವಿಯ ಮುಖ್ಯಸ್ಥರೂ ಆಗಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ಮತ್ತು ಸ್ನೇಹ ದಂಪತಿಯ ಪುತ್ರಿ.