ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ

Share with

ಉಡುಪಿ: ಮಳೆಗಾಲದಲ್ಲಿ ಅವ್ಯವಸ್ಥೆಗಳ ಆಗರವಾಗಿರುವ ಸಂತಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಇಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವೀಕ್ಷಣೆ ಮಾಡಿದರು.
ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯಲ್ಲಿ ಕಳೆದ ಕೆಲವು ಸಮಯಗಳಿಂದ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ವಿಳಂಬದಿಂದ ದಿನ ನಿತ್ಯ ಇಲ್ಲಿ ಗೋಳು ತಪ್ಪಿದ್ದಲ್ಲ. ಇಂದು ಸ್ಥಳಕ್ಕೆ ಆಗಮಿಸಿ ವೀಕ್ಷಿಸಿದ ಕೋಟ, ಸಮಸ್ಯೆಯ ಕುರಿತು ಗುತ್ತಿಗೆದಾರರ ಜೊತೆ ಸಮಾಲೋಚನೆ ನಡೆಸಿದರು.
ದಿನನಿತ್ಯ ಇಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಕುರಿತು ಗಮನ ಸೆಳೆದ ಶಾಸಕ ಯಶ್ಪಾಲ್ ಸುವರ್ಣ ಶೀಘ್ರ ಇದಕ್ಕೆ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಕೂಡ ಆಗಮಿಸಿದರು.
ಮಳೆಗಾಲದಲ್ಲಿ ಅವಘಡಗಳು ಸಂಭವಿಸುವ ಮೊದಲೇ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟವರಿಗೆ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆಗಳನ್ನು ನೀಡಿದರು.


Share with

Leave a Reply

Your email address will not be published. Required fields are marked *