ಇಂದ್ರಾಳಿ ರೈಲ್ವೆ ಕಾಮಗಾರಿ ಪರಿಶೀಲಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ

Share with

ಉಡುಪಿ: ಉಡುಪಿಗೆ ಭೇಟಿ ಇಂದು ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ನಗರದ ಇಂದ್ರಾಳಿ ರೈಲ್ವೆ ಸೇತುವೆ ಅಪೂರ್ಣ ಕಾಮಗಾರಿಯ ವೀಕ್ಷಣೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕೆಲಸ ಸಹಿತವಾಗಿ ನಾಲ್ಕು ವರ್ಷವಾಗಿದೆ, ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾನು ಭೇಟಿ ನೀಡಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದೇನೆ. ಜುಲೈ 2ರ ಒಳಗಾಗಿ ಮೆಸ್ಕಾಂನವರು ವಿದ್ಯುತ್ ಕಂಬಗಳನ್ನು ಶಿಫ್ಟ್ ಮಾಡುವುದಾಗಿ ಹೇಳಿದ್ದಾರೆ. ಎರಡು ತಿಂಗಳ ಒಳಗಾಗಿ ಎಲ್ಲ ಕಾಮಗಾರಿಯನ್ನು ಮುಗಿಸುವ ಭರವಸೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು. ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಮಳೆ ವಿಪರೀತವಾದರೆ 15 ದಿನ ವ್ಯತ್ಯಾಸ ಆಗಬಹುದು. ತಮ್ಮಿಂದ ಆಗಿರುವ ಪ್ರಮಾದವನ್ನು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ಕೆಲಸ ಪೂರ್ಣಗೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದರು.
ಸಂಸದ ಕೋಟ ಅವರಿಗೆ ಉಡುಪಿ‌ ಶಾಸಕ ಯಶ್ ಪಾಲ್ ಸುವರ್ಣ, ಬಿಜೆಪಿ ಮುಖಂಡರು ಸಾಥ್ ನೀಡಿದರು.


Share with

Leave a Reply

Your email address will not be published. Required fields are marked *