ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ ನಡೆಯಿತು.
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆಯಲ್ಲಿ ಎನ್.ಎಸ್.ಯು.ಐ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಉರ್ವಾ ಬಳಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.
ಬಿಜೆಪಿಗೆ ಧಿಕ್ಕಾರ ಕೂಗುತ್ತಾ ಮುತ್ತಿಗೆ ಹಾಕಲು ಜಮಾಯಿಸಿದ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್ ಗಳನ್ನು ಬಳಸಿ ತಡೆದರು. ಬ್ಯಾರಿಕೇಡ್ ತಳ್ಳಿ ಮುತ್ತಿಗೆಗೆ ಮುಂದಾದಾಗ ಪೊಲೀಸರು ಎನ್.ಎಸ್.ಯು.ಐ. ಕಾರ್ಯಕರ್ತರನ್ನು ವಶಕ್ಕೆ ಪಡೆದರು.