
ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್-ಮಿಸ್ ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್ ಶೆಟ್ಟಿಯವರು ಮೊದಲ ರನ್ನರ್ ಅಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ ಹಾಗೂ ಮಿಸ್ ಟೀನ್ ಟ್ಯಾಲೆಂಟೆಡ್ ಪ್ರಶಸ್ತಿ ಕೂಡ ತಮ್ಮದಾಗಿಸಿಕೊಂಡಿದ್ದಾರೆ.
ಕಾವೂರು ನಿವಾಸಿಗಳಾದ ಶರತ್ ಶೆಟ್ಟಿ ಹಾಗೂ ಶ್ವೇತಾ ಶರತ್ ಶೆಟ್ಟಿ ದಂಪತಿಗಳ ಪುತ್ರಿಯಾದ ಇವರು ಮಂಗಳೂರು ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾರೆ.