ಮುಡಾ ಪ್ರಕರಣ.. RTI ಕಾರ್ಯಕರ್ತನಿಗೆ ಜೀವ ಬೆದರಿಕೆ!

Share with

ಮುಡಾ ಬದಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ RTI ಕಾರ್ಯಕರ್ತ ಗಂಗರಾಜು ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹೀಗಾಗಿ, ಗಂಗರಾಜು ಅವರು ಓರ್ವ ಗನ್ ಮ್ಯಾನ್ ನೀಡುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಂಬಂಧ ಅವರ ಮನೆಯ ಬಳಿ ನಿರಂತರವಾಗಿ ಪೊಲೀಸ್ ಬೀಟ್ ನಿಯೋಜಿಸಲಾಗಿದೆ. ಅಲ್ಲದೇ, ಜೀವಹಾನಿ ಬಗ್ಗೆ ಮಾಹಿತಿ ಇದ್ದರೆ ಪೊಲೀಸ್‌ ಠಾಣೆಗೆ ದೂರು ನೀಡಿ ಎಂದು ಹಿಂಬರಹ ನೀಡಲಾಗಿದೆ.


Share with