ಮಂಜೇಶ್ವರ: ದ.ಕ. ಜಿಲ್ಲೆಯ ಮುಲ್ಕಿ ಕೊಲ್ನಾಡು ನಿವಾಸಿ, ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಎಂಬವರನ್ನು ಹತ್ಯೆ ಮಾಡಿ ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣದ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಪೂರ್ವ ದ್ವೇಷವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದು, ಕೊಲೆ ಆರೋಪಿ ಅಭಿಷೇಕ್ ಶೆಟ್ಟಿ ಸುರತ್ಕಲ್ ನಿವಾಸಿಯಾಗಿದ್ದು, ಮಂಗಳೂರಿನ ಶಾಲೆಯೊಂದರ ಬಸ್ಸು ಚಾಲಕನಾಗಿದ್ದ ಸಂದರ್ಭ ಉಂಟಾದ ದ್ವೇಷ ಕೊಲೆಗೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.