ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದಾಗಿ ಹಾಗೂ ಗುಡ್ಡ ಕುಸಿತದಿಂದ ಚಿಕ್ಕಮಗಳೂರಿನ ಜಲಪಾತ ಹಾಗೂ ಗಿರಿ ಪ್ರದೇಶಗಳಿಗೆ ವಿಧಿಸಲಾಗಿದ್ದ ಪ್ರವಾಸಿಗರ ಪ್ರವೇಶ ನಿರ್ಬಂಧವನ್ನು ಚಿಕ್ಕಮಗಳೂರು ಜಿಲ್ಲಾಡಳಿತವು ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ತೆರವುಗೊಳಿಸಿದೆ .
ರಾಜ್ಯದಲ್ಲಿ ಕಳೆದ 15 ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗಿದ್ದು. ಇದರಿಂದಾಗಿ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯಿಂದಾಗಿ ಹಳ್ಳ-ಕೊಳ್ಳ, ನದಿಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿದ್ದವು. ಈ ವೇಳೆ ಹಲವು ಅವಘಡಗಳು ಕೂಡ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ವಿವಿಧ ಪ್ರವಾಸಿ ಕ್ಷೇತ್ರಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಡಳಿತವು ನಿಷೇಧವನ್ನು ವಿಧಿಸಿತ್ತು. ಆದರೆ, ಈಗ ಕಳೆದ ಎರಡು ದಿನಗಳಿಂದ ಮಲೆನಾಡಿನಲ್ಲಿ ಮಳೆ ತಗ್ಗಿರುವ ಹಿನ್ನೆಲೆಯಲ್ಲಿ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತ ಅವಕಾಶವನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಮಾಡಿಕೊಟ್ಟಿದೆ.