ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ

Share with

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಬಂಧಿಸಲಾಗಿದ್ದು ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಬಂಧಿಸಲಾಗಿದ್ದು ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

ಆರೋಪಿಯನ್ನು ಪೊಲೀಸರು ನ್ಯಾಯಾಧೀಶರಾದ ಶ್ಯಾಮ್ ಪ್ರಕಾಶ್ ಅವರ ಮುಂದೆ ಹಾಜರುಪಡಿಸಲಾಗಿದ್ದು, ಅವರು ಆರೋಪಿಯನ್ನು ಹದಿನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಈ ಪ್ರಕರಣದ ಕುರಿತು ಎಸ್.ಪಿ ಡಾ| ಕೆ ಅರುಣ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರವೀಣ್ ಚೌಗುಲೆ ಕೊಲೆಯನ್ನು ಒಪ್ಪಿಕೊಂಡಿದ್ದಾರೆ. ಕೊಲೆಗೆ ಕಾರಣ ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ.

ಅವನ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು. ತಪ್ಪಿಸಿಕೊಳ್ಳಲು ಎಲ್ಲರನ್ನೂ ಕೊಲೆ ಮಾಡಿದ್ದಾನೆ. ಕೊಲೆ ಸಾಕ್ಷಿ ನಾಶ ಮಾಡಲು ಮೂವರ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು, ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ. ತನಿಖೆಯಿಂದ ಸಂಪೂರ್ಣ ಮಾಹಿತಿ ಸಿಗಲಿದೆ ಎಂದರು.


Share with

Leave a Reply

Your email address will not be published. Required fields are marked *