ಆತ್ಮಹತ್ಯೆಗೆ ಶರಣಾದ ಸಂಗೀತ ವಾದ್ಯ ಕಲಾವಿದ!

Share with

ಸಂಗೀತ ವಾದ್ಯ ಕಲಾವಿದರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಇಲ್ಲಿನ ಬೈಲಕೆರೆಯ ಸಂಗೀತ ಕಲಾವಿದ ಅಶ್ವಥ್ (32) ಮೃತ ದುರ್ದೈವಿ. ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಇವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಸದ್ಯ ಘಟನೆ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with