ಪುಟಾಣಿಯ ಹಠಕ್ಕೆ ಮನಸೋತು ಮುಸ್ಲಿಂ ವ್ಯಕ್ತಿ ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ

Share with

ಗದಗ, ಸೆಪ್ಟೆಂಬರ್ 10: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮುಸ್ಲಿಂ ಸಮುದಾಯದ ಮುಸ್ತಾಪ್ ಮಾಬುಸಾಬ್ ಕೋಲ್ಕಾರ ಎಂಬ ವ್ಯಕ್ತಿ ಗಣೇಶ ಚತುರ್ಥಿ ದಿನ ಹಿಂದೂ ಸಂಪ್ರದಾಯದಂತೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಸಾರಿದ್ದಾರೆ. ಮುಸ್ತಾಪ್ ಮತ್ತು ಯಾಸ್ಮಿನಾ ಬಾನು ದಂಪತಿಗಳಿಗೆ ಐದು ಜನ ಮಕ್ಕಳು. ಅವರ ಕೊನೆಯ ಮಗ 3 ವರ್ಷದ ಹಜರತಲಿಗೆ ಗಣೇಶ ದೇವರ ಮೂರ್ತಿಯೆಂದರೆ ಬಹಳ ಪ್ರೀತಿ. ದೇವರು-ಧರ್ಮ, ಜಾತಿ ಹೆಸರಿನಲ್ಲಿ ದೇಶದಲ್ಲಿ ನಡೆಯುತ್ತಿರುವ ಅರಾಜಕತೆ, ಧರ್ಮಯುದ್ಧದ ಬಗ್ಗೆ ಏನೂ ಅರಿಯದ ಪುಟಾಣಿ ತಾನು ಗಣೇಶನನ್ನು ಮನೆಗೆ ತೆಗೆದುಕೊಂಡು ಹೋಗಬೇಕು, ಎಲ್ಲರಂತೆ ಪೂಜಿಸಬೇಕು, ಪಟಾಕಿ ಹೊಡೆಯಬೇಕು, ಕುಣಿದು ಕುಪ್ಪಳಿಸಬೇಕೆಂಬ ಹಂಬಲ. ಈ ಬಗ್ಗೆ ತಂದೆ-ತಾಯಿ ಹತ್ತಿರ ಕೇಳಿ ಅತ್ತು ಕರೆದು ಹಠ ಮಾಡಿದ್ದರೂ ತಂದೆ ಹೇಗೋ ಸಮಾಧಾನ ಮಾಡಿ ಮಾತು ಮರೆಸಿದ್ದರು.

ಆದರೆ, ಗಣೇಶ ಚತುರ್ಥಿ ದಿನ ಎಲ್ಲರೂ ಮನೆಗೆ ಗಣೇಶ ಮೂರ್ತಿ ತರುವುದನ್ನು ಗಮನಿಸಿದ ಹಜರತಲಿ, ತನ್ನ ಅಣ್ಣನೊಂದಿಗೆ ಗಣೇಶಮೂರ್ತಿ ಮಾರಾಟ ಮಾಡುವಲ್ಲಿಗೆ ಹೋಗಿ ಗಣೇಶನ ಮೂರ್ತಿಯನ್ನು ಮನೆಗೆ ತಂದಿದ್ದಾನೆ. ಇದನ್ನು ಕಂಡ ತಂದೆ-ತಾಯಿ ಒಂದು ಕ್ಷಣ ಮೌನವಾಗಿದ್ದಾರೆ. ಗ್ರಾಮೀಣ ಭಾಗದ ಪರಿಸರ. ಜಾತಿ ಧರ್ಮದ ಹಂಗಿಲ್ಲದೇ ಎಲ್ಲರೂಂದಿಗೆ ಸಹೋದರತ್ವ ಭಾವನೆಯಿಂದ ಬದುಕುವುದನ್ನು ಅರಿತ ತಂದೆ-ತಾಯಿಗಳು ಮಗನ ಬಗ್ಗೆ ಒಂದಷ್ಟೂ ಬೇಸರ ಮಾಡಿಕೊಳ್ಳದೇ ಗಣೇಶನ ಮೂರ್ತಿಯಿಂದ ಶ್ರದ್ಧಾ ಭಕ್ತಿಯಿಂದ ಬರ ಮಾಡಿಕೊಂಡು ಮನೆಯಲ್ಲಿ ಪ್ರತಿಷ್ಠಾಪಿಸಿ ಹಿಂದೂ ಸಂಪ್ರದಾ


Share with

Leave a Reply

Your email address will not be published. Required fields are marked *