
ನೆರೆಯ ರಾಜ್ಯ ತೆಲಂಗಾಣದಲ್ಲಿ ಇತ್ತೀಚೆಗೆ ಹಕ್ಕಿ ಜ್ವರದಿಂದ ಸಾವಿರಾರು ಸಂಖ್ಯೆಯಲ್ಲಿ ಪಕ್ಷಿಗಳು ಸಾವನ್ನಪ್ಪುತ್ತಿದೆ. ಇದೀಗ ಈ ಹಕ್ಕಿ ಜ್ವರ ಕರ್ನಾಟಕಕ್ಕೂ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಯಚೂರಿನ ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳ ಸರಣಿ ಸಾವುಗಳಾಗುತ್ತಿವೆ. ಪಾರಿವಾಳ, ಕೊಕ್ಕರೆ, ಕಾಗೆ ಹಾಗು ಸುವರ್ಣ ಪಕ್ಷಿಗಳ ಸಾವುಗಳಾಗುತ್ತಿವೆ. ಇಲ್ಲಿನ ಮನ್ಸೂದ್ ಅಲಿ ತೋಟದಲ್ಲಿ 8 ರಿಂದ 10 ಪಕ್ಷಿಗಳು ಸಾವನ್ನಪ್ಪಿವೆ. ಇದು ಜನರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.




