ಉಪ್ಪಳ: ಕುಂಬಳೆ ಆರಿಕ್ಕಾಡಿ ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದಲ್ಲಿ ನಡಾವಳಿ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆದು ಫೆ.1ರಂದು ಸಂಪನ್ನಗೊಂಡಿತು.
ಅಂದು ಬೆಳಿಗ್ಗೆ ಗಣಪತಿ ಹೋಮ, ಮೂಲಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ ಕಟ್ಟೆಗೆ ಶುದ್ದಿ ಕಲಶ ಮತ್ತು ತಂಬಿಲ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಹೂವಿನ ಪೂಜೆ, ತುಲಾಭಾರ ಸೇವೆ, ಭಗವತೀ ದರ್ಶನ, ಕೆಂಡಸೇವೆ, ಬಿಂಬ ಬಲಿ ದರ್ಶನ ಮೊದಲಾದ ಕಾರ್ಯಕ್ರಮ ನಡೆಯಿತು.