ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ ಇನ್ನಿಲ್ಲ

Share with

ಕಾಪು: ಪರಿಸರದ ಖ್ಯಾತ ನಾಗಸ್ವರ ವಾದಕರಾಗಿ ಹತ್ತಾರು ದೇವಸ್ಥಾನ ದೈವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದ ಕೊಪ್ಪಲಂಗಡಿ ನಿವಾಸಿ ಜಲೀಲ್ ಸಾಹೇಬ್ ದಿಢೀರ್ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಖ್ಯಾತ ನಾಗಸ್ವರ ವಾದಕರಾಗಿ ಹತ್ತಾರು ದೇವಸ್ಥಾನ ದೈವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದ ಕೊಪ್ಪಲಂಗಡಿ ನಿವಾಸಿ ಜಲೀಲ್ ಸಾಹೇಬ್.

ನ.13ರಂದು ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು. ಹೋಟೇಲ್ ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಜಲೀಲ್ ಸಾಹೇಬ್ ಅವರು ನ.11ರಂದು ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ನ.12ರಂದು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾಗಸ್ವರ ಸೇವೆ ನೀಡಿದ್ದರು. ಕಾಪು ಸಾವಿರ ಸೀಮೆಯ ಒಡೆಯ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿ, ಕಾಪು ಮೂರನೇ ಮಾರಿಗುಡಿ ಸಹಿತ ಕಾಪು ಮಾರಿಯಮ್ಮ ದೇವಿ ಸನ್ನಿಧಿ ಹಾಗೂ ಕಾಪು ಸಾವಿರ ಸೀಮೆಯ ಹೆಚ್ಚಿನ ದೇವಸ್ಥಾನ, ಗರಡಿ, ದೇವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಸೇವೆ ನೀಡುತ್ತಿದ್ದರು.

ಕಾಪು ಪರಿಸರ ಮಾತ್ರವಲ್ಲದೆ ಹತ್ತಾರು ದೇವಸ್ಥಾನ ದೈವಸ್ಥಾನದಲ್ಲಿ ನಾಗಸ್ವಾರ ವಾದಕರಾಗಿ ಸೇವೆ ಸಲ್ಲಿಸುತ್ತಿದ್ದ ಸಾಹೇಬರು ತನ್ನದೇ ಆದಾ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಮೃತರು, ಪತ್ನಿ, ಮಗಳು, ಸಹೋದರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.


Share with

Leave a Reply

Your email address will not be published. Required fields are marked *