ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ ಜನರಲ್ಲಿ ರಾಷ್ಟ್ರಭಕ್ತಿ ಜಾಗೃತಿಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಹಮ್ಮಿಕೊಳ್ಳಲಾಗಿರುವ ‘ನನ್ನ ಮಣ್ಣು– ನನ್ನ ದೇಶ’ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ದ. ಕ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಸೆ.10 ರಂದು ಮಂಗಳೂರಿನ ಕದ್ರಿ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ವೇದವ್ಯಾಸ್ ಕಾಮತ್, ಡಾ.ವೈ ಭರತ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಎಂ, ನಾಗರಾಜ್ ಶೆಟ್ಟಿ, ಸಂತೋಷ್ ಕುಮಾರ್ ಬೋಳಿಯಾರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.