ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಸಮುದಾಯದ ಅಭ್ಯರ್ಥಿಗಳನ್ನು ನಾರಾಯಣಗುರು ವಿಚಾರ ವೇದಿಕೆ ಪಕ್ಷತೀತವಾಗಿ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ಹೇಳಿದರು.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ಪದ್ಮರಾಜ್ ಮತ್ತು ಉಡುಪಿ–ಚಿಕ್ಕಮಂಗಳೂರಿನಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರಿಗೆ ಅವಕಾಶ ಸಿಕ್ಕಿದೆ. ನಾರಾಯಣಗುರು ವಿಚಾರ ವೇದಿಕೆ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ, ಬದಲು ಸಮುದಾಯದ ಅಭ್ಯರ್ಥಿಗಳನ್ನು ಪಕ್ಷತೀತವಾಗಿ ಬೆಂಬಲಿಸಲಿದೆ ಎಂದು ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದರು.
ಬಹಳ ವರ್ಷಗಳ ನಂತರ ಮೂರು ಸ್ಥಾನಗಳಲ್ಲಿ ನಾರಾಯಣ ಗುರು ಸಮಾಜಕ್ಕೆ ಅವಕಾಶ ಸಿಕ್ಕಿದೆ. ಹೀಗಾಗಿ ಪಕ್ಷ ಯಾವುದೇ ಇರಲಿ ಬಿಲ್ಲವರನ್ನು ಗೆಲ್ಲಿಸುವ ಕೆಲಸ ಬಿಲ್ಲವರಿಂದ ಆಗಬೇಕು ಎಂದು ಸತ್ಯಜಿತ್ ಸುರತ್ಕಲ್ ಅವರು ಕರೆ ನೀಡಿದರು.