

ಪುತ್ತೂರು: ರಾಷ್ಟ್ರೀಯ ಸಿಎಸ್‌ಸಿ ಅಕಾಡೆಮಿ ಒಲಿಂಪಿಯಾಡ್ ನಡೆಸುವ ೨೦೨೪-೨೫ ನೇ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿ.ರವರು ರಾಜ್ಯ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಆನ್‌ಲೈನ್ ಮೂಲಕವೇ ಈ ಪರೀಕ್ಷೆ ನಡೆಯುತ್ತಿದ್ದು ಇದರಲ್ಲಿ ರಾಜ್ಯದಿಂದ ಇಬ್ಬರು ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದು ಅದರಲ್ಲಿ ದ.ಕ ಜಿಲ್ಲೆಯಿಂದ ಸೃಜನ್ ಕೆ.ಪಿ.ಯರವರು ಓರ್ವರಾಗಿದ್ದಾರೆ.
ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸಿ.ಎಸ್. ಸಿ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ.
ಸೃಜನ್ ಕೆ.ಪಿ ಇವರು ತೆಂಕಿಲ ನರೇಂದ್ರ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜ್ ವಿದ್ಯಾರ್ಥಿ ಸಂಘದ ನಾಯಕರೂ ಆಗಿದ್ದಾರೆ. ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಟ್ಟಂಪಾಡಿ ವಲಯ ಸೇವಿಪ್ರತಿನಿಧಿ, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮತ್ತು ಉದ್ಯಮಿ ಪ್ರವೀಣ್ ಪಲ್ಲತ್ತಾರುರವರ ಪುತ್ರರಾಗಿದ್ದಾರೆ.
……..
ಚಿತ್ರ: ಸೃಜನ್ ಕೆ.ಪಿ




