ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ ಘಟಕದ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಸ್ವಾಮಿ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ಅವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ. ಘಟಕಗಳು ವಿದ್ಯಾರ್ಥಿಯಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ ಎಂದು ಹೇಳಿದರು. ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರು ಮತ್ತು ಎನ್.ಸಿ.ಸಿ ಅಧಿಕಾರಿ ಲೆಪ್ಟಿನೆಂಟ್ ಪ್ರದೀಪ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶಶಿಧರ್ ಎಸ್.ಪ್ರಸ್ತಾವನೆಗೈದರು. ಎನ್.ಎಸ್.ಎಸ್ ಸ್ವಯಂ ಸೇವಕರು ಎನ್.ಎಸ್.ಎಸ್ ಗೀತೆಯನ್ನು ಹಾಡಿದರು. ಎನ್.ಎಸ್.ಎಸ್ ಸ್ವಯಂ ಸೇವಕಿ ಯಕ್ಷಿತಾ ಸ್ವಾಗತಿಸಿ, ಎನ್.ಎಸ್.ಎಸ್ ಸ್ವಯಂ ಸೇವಕಿ ಪ್ರಜ್ಞಾವಿ ವಂದಿಸಿದರು. ಎನ್.ಸಿ.ಸಿ ಕೆಡಿಟ್ ನಿಖಿತಾ ಕಾರ್ಯಕ್ರಮವನ್ನು ನಿರೂಪಿಸಿದರು.