ಮಂಗಳೂರು: ಬರುವ ಬೇಸಿಗೆಯಲ್ಲಿ ರಾಜ್ಯದ ಯಾವುದೇ ಕಾಡಿನಲ್ಲಿ ಕಾಡ್ಗಿಚ್ಚಿನಿಂದ ಹಾನಿ ಆಗದಂತೆ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಕಟ್ಟೆಚ್ಚರ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಫೆ.5ರಂದು ಕುಕ್ಕೆ ಸುಬ್ರಹ್ಮಣ್ಯದ ಕಾಡ್ಗಿಚ್ಚು ನಂದಿಸುವ ಅಣಕು ಕಾರ್ಯಾಚರಣೆ ವೀಕ್ಷಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಈ ಬಾರಿ ರಾಜ್ಯದಲ್ಲಿ ಮಳೆ ಕೊರತೆಯಿಂದ ನೀರಿನ ಸಮಸ್ಯೆ ಇದ್ದು, ಕಾಡ್ಗಿಚ್ಚಿನ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯದಲ್ಲಿ ಸತತ ನಿಗಾ ಇಟ್ಟು ಯಾವುದೇ ಅಗ್ನಿ ದುರಂತ ಸಂಭವಿಸದಂತೆ ಕಟ್ಟೆಚ್ಚರ ವಹಿಸಲು ಸೂಚಿಸಿದರು.
ಇದಕ್ಕೂ ಮುನ್ನ ಸಚಿವರು ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಭೇಟಿ ನೀಡಿ, ಅರಣ್ಯ ಸಂರಕ್ಷಣೆ ಕುರಿತ ಬೀದಿ ನಾಟಕವನ್ನು ವೀಕ್ಷಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.