ಉಡುಪಿ: ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರವಾಗಿ ಕೊಲೆ ಮಾಡಿದ ಹಂತಕನ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವುದರ ಜೊತೆಗೆ ಆತನನ್ನು ಗಲ್ಲಿಗೇರಿಸಬೇಕು ಎಂದು ಎಬಿವಿಪಿ ಉಡುಪಿ ನಗರ ಕಾರ್ಯದರ್ಶಿ ಶ್ರೀವತ್ಸ ಒತ್ತಾಯಿಸಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಠಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂಬುವುದಕ್ಕೆ ಈ ಘಟನೆಯೇ ನಿದರ್ಶನ ಎಂದರು.
ಪೊಲೀಸರು ಕೂಡಲೇ ತನಿಖೆ ಕೈಗೊಂಡು ಅಪರಾಧಿಗೆ ಉಗ್ರ ಶಿಕ್ಷೆ ಆಗುವಂತೆ ಮಾಡಬೇಕು. ಆ ಮೂಲಕ ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ನೇಹಾ ಹಿರೇಮಠ ಪರವಾಗಿ ನ್ಯಾಯಕ್ಕಾಗಿ ರಾಜ್ಯಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಸಾಮಾನ್ಯ, ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಆದರೆ ಕಾರ್ಕಳದಲ್ಲಿ ನಡೆದ ಪ್ರತಿಭಟನೆ ವಿರುದ್ಧ ಸರಕಾರ ಎಫ್‌ಐಆರ್ ದಾಖಲಿಸಿ ವಿದ್ಯಾರ್ಥಿಗಳ ಧ್ವನಿಯನ್ನು ಕುಗ್ಗಿಸುವ ಪ್ರಯತ್ನ ಮಾಡಿದೆ. ಇಲಾಖೆ ಕೂಡಲೇ ಈ ವಿಚಾರವನ್ನು ಮರುಪರಿಶೀಲಿಸಿ ಎಫ್ ಐಆರ್ ಅನ್ನು ವಜಾಗೊಳಿಸಬೇಕು. ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸಹಕಾರ್ಯದರ್ಶಿ ಹರ್ಷಿತ್ ಕೊಯ್ಲ ತಿಳಿಸಿದರು.