ನೇಜಾರು ಕೊಲೆ ಪ್ರಕರಣ: ಜೂ.19-20ರಂದು ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ

Share with

ಉಡುಪಿ, ಎ.25: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೂ.19 ಮತ್ತು ಜೂ.20ರಂದು ದಿನ ನಿಗದಿ ಪಡಿಸಿದೆ.ಪ್ರ

ಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದ್ದು, ಈ ನಿಟ್ಟಿನಲ್ಲಿ ಸದ್ಯ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿ ಪಡಿಸುವುದು ಬೇಡ ಎಂದು ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಜೂ.19ರಂದು ದೂರುದಾರೆ ಹಾಗೂ ಒಂದನೇ ಸಾಕ್ಷಿಯ ವಿಚಾರಣೆ ಮತ್ತು ಜೂ.20ರಂದು ಎರಡು ಮತ್ತು ಮೂರನೇ ಸಾಕ್ಷಿಗಳ ವಿಚಾರಣೆಗೆ ದಿನ ನಿಗದಿಪಡಿಸಿದರು.


Share with

Leave a Reply

Your email address will not be published. Required fields are marked *