ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಚಾರ್ಜ್(ಆಪಾದನೆ ವಾಚಿಸುವ) ಪ್ರಕ್ರಿಯೆಯನ್ನು ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತಂದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್ಪಿ ಡಾ.ಅರುಣ್ ಕೆ ಅವರು, ಆರೋಪಿಯನ್ನು ಬೆಂಗಳೂರು ಸೆಂಟ್ರಲ್ ಜೈಲಿನಿಂದ ಕರೆತಂದು ಮತ್ತೆ ವಾಪಾಸು ಅಲ್ಲಿಗೇ ಕರೆದೊಯ್ಯಲಾಗಿದೆ. ನ್ಯಾಯಾಲಯದಲ್ಲಿ ಚಾರ್ಜ್ ಪ್ರಕ್ರಿಯೆ ನಡೆದಿದ್ದು, ಶೀಘ್ರ ಈ ಪ್ರಕರಣದ ವಿಚಾರಣಾ ಪ್ರಕ್ರಿಯೆ ನಡೆಯಲಿದೆ ಎಂದರು.