
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ವಲಯಕ್ಕೆ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ (PMDDKY) ಎಂಬ ನೂತನ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯ ಮೊದಲ ಹಂತವಾಗಿ 100 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುವುದು.
ದೇಶದಲ್ಲಿ ಕಡಿಮೆ ಇಳುವರಿ ಇರುವ 100 ಜಿಲ್ಲೆಗಳನ್ನು ಆಯ್ಕೆ ಮಾಡಿ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸೀತಾರಾಮನ್ ಘೋಷಿಸಿದ್ದಾರೆ.




