ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗುತ್ತಿದೆ. ಮಂಗಳೂರು ಹೊರವಲಯದ ವಾಮಾಂಜೂರಿನಲ್ಲಿ ಸುಸಜ್ಜಿತ ಸ್ವಂತ ಕಟ್ಟಡ ನಿರ್ಮಾಣಗೊಂಡಿದ್ದು, ಇದೇ ಅ.29ರ ಭಾನುವಾರದಂದು ನೂತನ ಪೊಲೀಸ್ ಠಾಣಾ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ.
ರಾಜ್ಯ ಗೃಹ ಸಚಿವರಾದ ಡಾ|ಜಿ ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಸಭಾ ಸಭಾಪತಿ ಯು.ಟಿ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ|ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ|ಅಲೋಕ್ ಮೋಹನ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪಶ್ಚಿಮ ವಲಯ ಐಜಿಪಿ ಡಾ|ಚಂದ್ರಗುಪ್ತಾ, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಸಹಿತ ಅನೇಕ ಹಿರಿಯ ಕಿರಿಯ ಅಧಿಕಾರಿ ವರ್ಗ ಸೇರಿದಂತೆ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.