ಪುತ್ತೂರು: ನಿಡ್ಪಳ್ಳಿ ಗ್ರಾ.ಪಂನ ವಾರ್ಡ್-1ಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ಶೆಟ್ಟಿ ಜಯಗಳಿಸಿದ್ದಾರೆ.
ಜು.23ರಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು 607 ಮತಗಳ ಪೈಕಿ 529 ಮತಗಳು ಚಲಾವಣೆಯಾಗಿದೆ. ಇದರಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಗನ್ನಾಥ ರೈ ಕೊಳಂಬೆತ್ತಿಮಾರ್ 208 ಮತ, ಕಾಂಗ್ರೆಸ್ ಬೆಂಬಲಿತ ಸತೀಶ್ ಶೆಟ್ಟಿ 235 ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಶೇಖರ ಪ್ರಭು 85 ಮತಗಳನ್ನು ಪಡೆದುಕೊಂಡಿದ್ದಾರೆ.