ಪುತ್ತೂರು: ಭೂ ನ್ಯಾಯ ಮಂಡಳಿಯ ಸದಸ್ಯರು, ಕೋಡಿಂಬಾಡಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಧ್ಯಾಕ್ಷ ನಿರಂಜನ ರೈ ಮಠಂತಬೆಟ್ಟು ಅವರು ಜು.8ರಂದು ಹೃದಯಾಘಾತದಿಂದ ನಿಧನರಾದರು.

ಬೆಳಿಗ್ಗೆ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಭೂ ನ್ಯಾಯ ಮಂಡಳಿಯ ಕೋರ್ಟ್ ಕಲಾಪಕ್ಕೆ ಬಂದಿದ್ದ ನಿರಂಜನ ರೈಯವರು ಅಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.




